ಕಂಪ್ಲಿಯಲ್ಲಿ ಅ.17ರಂದು ಜೆಸ್ಕಾಂ ಗ್ರಾಹಕರ ಕುಂದುಕೊರತೆ ಸಭೆ
ವಿದ್ಯುತ್ ಗ್ರಾಹಕರ ಸಮಸ್ಯೆ, ದೂರುಗಳ ಪರಿಹಾರಕ್ಕೆ ಅವಕಾಶ
ಕಂಪ್ಲಿ: ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ) ವತಿಯಿಂದ ಅಕ್ಟೋಬರ್ 17ರಂದು ಬೆಳಿಗ್ಗೆ 10 ಗಂಟೆಗೆ ಕಂಪ್ಲಿಯ ಕಾರ್ಯ ಮತ್ತು ಪಾಲನಾ ಉಪವಿಭಾಗದ ಕಚೇರಿಯಲ್ಲಿ ವಿದ್ಯುತ್ ಗ್ರಾಹಕರ ಕುಂದುಕೊರತೆ ಸಭೆ ಆಯೋಜಿಸಲಾಗಿದೆ.
ಸಭೆಯಲ್ಲಿ ವಿದ್ಯುತ್ ಗ್ರಾಹಕರು ಭಾಗವಹಿಸಿ, ವಿದ್ಯುತ್ ಪೂರೈಕೆ ಸೇರಿದಂತೆ ವಿವಿಧ ಸಮಸ್ಯೆಗಳು ಹಾಗೂ ದೂರುಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳಬಹುದು ಎಂದು ಜೆಸ್ಕಾಂನ ಕಂಪ್ಲಿ ಕಾರ್ಯ ಮತ್ತು ಪಾಲನಾ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ತಿಳಿಸುವ ಮೂಲಕ ಪರಿಹಾರ ಪಡೆದುಕೊಳ್ಳುವಂತೆ ಜೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.
📰 Siddi TV | ನೈತಿಕ ಹಾಗೂ ಸ್ವತಂತ್ರ ಮಾಧ್ಯಮ
ಸ್ಥಳೀಯ ಸುದ್ದಿಗಳು • ಜನರ ಧ್ವನಿ • ನಿಖರ ಮಾಹಿತಿ
