ಕಂಪ್ಲಿಯಲ್ಲಿ ಅಪ್ಪು 5ನೇ ವರ್ಷದ ಪುಣ್ಯಸ್ಮರಣೆ
ಅಪ್ಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಸ್ಮರಣೆ
ಕಂಪ್ಲಿ: ಪಟ್ಟಣದ ಸರ್ಕಾರಿ ಆಸ್ಪತ್ರೆ ಸಮೀಪವಿರುವ ಅಪ್ಪು ಸರ್ಕಲ್ನಲ್ಲಿ ಕನ್ನಡದ ಜನಪ್ರಿಯ ನಟ, ದಿವಂಗತ ಡಾ. ಪುನೀತ್ ರಾಜ್ಕುಮಾರ್ ಅವರ 5ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವಪೂರ್ವಕವಾಗಿ ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಅಭಿಮಾನಿಗಳು ಅಪ್ಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಸರಳತೆ, ಮಾನವೀಯತೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ನೆನಪಿಸಿಕೊಂಡರು.
ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ ಪುನೀತ್ ರಾಜ್ಕುಮಾರ್ ಅವರು ತಮ್ಮ ಅಭಿನಯದ ಜೊತೆಗೆ ಸಮಾಜಸೇವೆಯ ಮೂಲಕವೂ ಜನರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದಾರೆ. ಅಪ್ಪು ಅವರ ನೆನಪುಗಳು ಅಭಿಮಾನಿಗಳ ಹೃದಯದಲ್ಲಿ ಸದಾ ಜೀವಂತವಾಗಿರಲಿವೆ.
ಸಿದ್ದಿ ಟಿವಿ | SIDDITV.com
