ರಾಜಕೀಯ ಸುದ್ದಿ
ಬಂಧನದ ವಾರೆಂಟ್ ಸುದ್ದಿ ಬೆನ್ನಲ್ಲೇ ಮಾಜಿ ಶಾಸಕ ಟಿ.ಎಚ್. ಸುರೇಶ್ ಬಾಬು ಸ್ಪಷ್ಟನೆ
ಕಂಪ್ಲಿ: ಬಿಹಾರ ನ್ಯಾಯಾಲಯದಿಂದ ಬಂಧನದ ವಾರೆಂಟ್ ಹೊರಡಿಸಲಾಗಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ಕಂಪ್ಲಿ ಮಾಜಿ ಶಾಸಕ ಟಿ.ಎಚ್. ಸುರೇಶ್ ಬಾಬು ಅವರು ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು,
“ನನಗೆ ವಾರೆಂಟ್ ಜಾರಿಯಾಗಿದೆ, ನನ್ನನ್ನು ಬಂಧಿಸಲಾಗುತ್ತಿದೆ ಎಂಬ ಸುದ್ದಿಗಳೆಲ್ಲವೂ ಸತ್ಯಕ್ಕೆ ದೂರವಾದವು. ಇದು ಸಂಪೂರ್ಣವಾಗಿ ನನ್ನ ವೈಯಕ್ತಿಕ ವ್ಯವಹಾರ ಹಾಗೂ ವ್ಯಾಪಾರಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಯಷ್ಟೇ. ಇದನ್ನು ನನ್ನ ಕಾನೂನು ತಂಡ ಸಮರ್ಥವಾಗಿ ನಿರ್ವಹಿಸುತ್ತಿದೆ. ವದಂತಿಗಳಿಗೆ ಕಿವಿಗೊಡಬೇಡಿ, ಯಾರೂ ಆತಂಕಪಡುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ.
ಈ ಮೂಲಕ ಬಿಹಾರ ನ್ಯಾಯಾಲಯದ ವಾರೆಂಟ್ ಹಾಗೂ ಬಂಧನದ ಕುರಿತು ಹರಿದಾಡುತ್ತಿರುವ ಸುದ್ದಿಗಳಿಗೆ ಮಾಜಿ ಶಾಸಕ ಟಿ.ಎಚ್. ಸುರೇಶ್ ಬಾಬು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ವರದಿ: ಸಿದ್ದಿ ಟಿವಿ
ವೆಬ್‌ಸೈಟ್: WWW.SIDDITV.COM
ವೆಬ್‌ಸೈಟ್: WWW.SIDDITV.COM

