ಬೆಲೆ ಏರಿಕೆ ಖಂಡಿಸಿ ಕಂಪ್ಲಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ – ಬೆಲೆ ಏರಿಕೆ ನಿಯಂತ್ರಣಕ್ಕೆ ಬಿಜೆಪಿ ಮುಖಂಡರ ಒತ್ತಾಯ
ಕಂಪ್ಲಿ: ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿರುವ ಬೆಲೆ ಏರಿಕೆ ಹಾಗೂ ರಾಜ್ಯ ಸರ್ಕಾರದ ವಿವಿಧ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಕಂಪ್ಲಿ ಮಂಡಲ ವತಿಯಿಂದ ಬುಧವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಹೆಸರಿನಲ್ಲಿ ವಿವಿಧ ವಸ್ತುಗಳು ಮತ್ತು ಸೇವೆಗಳ ದರ ಏರಿಕೆ ಮಾಡಲಾಗುತ್ತಿದೆ. ಇದರಿಂದ ಬಡವರು, ರೈತರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಸಾಮಾನ್ಯ ಜನರಿಗೆ ಆರ್ಥಿಕ ಹೊರೆ ಹೆಚ್ಚಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ರಾಜ್ಯ ಸರ್ಕಾರ ಬೆಲೆ ಏರಿಕೆಯನ್ನು ನಿಯಂತ್ರಿಸಬೇಕು ಹಾಗೂ ಜನಸಾಮಾನ್ಯರಿಗೆ ಹೊರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಸಿ.ಡಿ. ಮಹಾದೇವ, ಅಳ್ಳಳ್ಳಿ ವೀರೇಶ್, ಸುದರ್ಶನ ರೆಡ್ಡಿ, ವಿರೇಶ್, ರಾಘವೇಂದ್ರ ತಳವಾರ್, ರಾಮಾಂಜನೇಯಲು, ಚಂದ್ರಶೇಖರ್ ಗೌಡ, ರಾಜು, ನಾಗೇಂದ್ರ, ಪ್ರಶಾಂತ್ ಸೇರಿದಂತೆ ಪಕ್ಷದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ಸಿದ್ದಿ ಟಿವಿ ರಘುವೀರ್
ಸಿದ್ದಿ ಟಿವಿ – ಕಂಪ್ಲಿಯ ಸುದ್ದಿ ಮತ್ತು ಮನೋರಂಜನಾ ವಾಹಿನಿ

