ಕಂಪ್ಲಿ ತಾಲೂಕು ಪಂಚಾಯಿತಿಯಲ್ಲಿ 71ನೇ ಕನ್ನಡ ರಾಜ್ಯೋತ್ಸವ ಆಚರಣೆ
ಕಂಪ್ಲಿ ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಭಾನುವಾರ ಸಂಭ್ರಮದಿಂದ ಆಚರಿಸಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ಕೆ. ಶ್ರೀಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ನಾಡು, ನುಡಿ, ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಮಹತ್ವವನ್ನು ಸ್ಮರಿಸಲಾಯಿತು.
ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆ, ಕನ್ನಡ ನಾಡಿನ ಇತಿಹಾಸ ಹಾಗೂ ಪರಂಪರೆಯ ಸಂರಕ್ಷಣೆ, ಕನ್ನಡಿಗರಲ್ಲಿ ಏಕತೆ ಮತ್ತು ಸಹೋದರತ್ವದ ಭಾವನೆ ಬೆಳೆಸುವಲ್ಲಿ ಕನ್ನಡ ರಾಜ್ಯೋತ್ಸವದ ಮಹತ್ವವನ್ನು ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ ನಿರ್ದೇಶಕ ಮಲ್ಲನಗೌಡ ಕೆ.ಎಸ್., ತಾಲೂಕು ಪಂಚಾಯಿತಿ ಕೆಡಿಪಿ ಸದಸ್ಯ ಕಾಳಿಂಗ ವರ್ಧನ, ಪ್ರಥಮ ದರ್ಜೆ ಸಹಾಯಕ ಕುಂಬಾರ ಸುರೇಶ್, ದ್ವಿತೀಯ ದರ್ಜೆ ಸಹಾಯಕ ಭಂಡಾರಿ ಸುರೇಶ್, ತಾಲೂಕು ಐಇಸಿ ಸಂಯೋಜಕ ಹನುಮೇಶ್, ಎನ್ಆರ್ಎಲ್ಎಂನ ಪಾರ್ವತಿ ಸೇರಿದಂತೆ ತಾಲೂಕು ಪಂಚಾಯಿತಿ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
