Kampli : ತಾಲೂಕು ಆಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ


ಕಂಪ್ಲಿಯಲ್ಲಿ ತಾಲೂಕು ಆಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಕಂಪ್ಲಿ: ತಾಲೂಕು ಆಡಳಿತ ವತಿಯಿಂದ ಪಟ್ಟಣದಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ರಾಜ್ಯೋತ್ಸವದ ಅಂಗವಾಗಿ ಪಟ್ಟಣದ ಸೋಮಪ್ಪನ ದೇವಸ್ಥಾನದ ಆವರಣದಲ್ಲಿ ತಾಯಿ ಭುವನೇಶ್ವರಿ ಪ್ರತಿಮೆಗೆ ತಹಶೀಲ್ದಾರ್ ಜೂಗಲ ಮಂಜುನಾಯಕ್ ಅವರು ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಿದರು.

ನಂತರ ನಗರದ ಪ್ರಮುಖ ಬೀದಿಗಳಲ್ಲಿ ಕನ್ನಡ ಬಾವುಟಗಳೊಂದಿಗೆ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಕನ್ನಡ ನಾಡು, ನುಡಿ, ಭಾಷೆಯ ಮಹತ್ವ ಸಾರುವ ಘೋಷಣೆಗಳೊಂದಿಗೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಪಟ್ಟಣದಲ್ಲಿ ಮನೆಮಾಡಿತ್ತು.


ಸಿದ್ದಿ ಟಿವಿ | ಕಂಪ್ಲಿ

Previous Post Next Post

Contact Form

f="https://unpkg.com/video.js/dist/video-js.css" rel="stylesheet">